Monday, January 17, 2022
Google search engine
HomeUncategorizedರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌?; ಸುಳಿವು ನೀಡಿದ ಕಂದಾಯ ಸಚಿವ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌?; ಸುಳಿವು ನೀಡಿದ ಕಂದಾಯ ಸಚಿವ

ಬೆಂಗಳೂರು: ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ರಾಜ್ಯದಲ್ಲಿ ಆರೂವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಈಗಾಗಲೇ ವಿವಿಧ ರಾಜ್ಯಗಳಲ್ಲಿ 3ನೇ ಅಲೆಯ ಭೀತಿ ಶುರುವಾಗಿದೆ. ವಾರದಿಂದ ವಾರಕ್ಕೆ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್ ಡೌನ್ ಕೂಡ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ರೆಡ್ ಜೋನ್ ಪಟ್ಟಿಯಲ್ಲಿ ಬೆಂಗಳೂರು ಕೂಡ ಇದೆ. ಜನವರಿ 7ನೇ ತಾರೀಕಿನವರೆಗೆ ನೈಟ್ ಕರ್ಪ್ಯೂ ( Night Curfew ) ಇದೆ. ಈಗಾಗಲೇ ತಜ್ಞರ ಸಮಿತಿಯು ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ಅವರು ನೀಡೋ ಸಲಹೆಯನ್ನು ಯಥಾ ಪ್ರಕಾರ ಜಾರಿಗೆ ತರಲಾಗುತ್ತದೆ. ಈ ಬಾರಿ ಯಾವುದೇ ಅಚಾತುರ್ಯ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ನಮಗೆ ರಾಜ್ಯದ ಜನರ ಹಿತ ದೃಷ್ಠಿ ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments